ನವದೆಹಲಿ, ಜು 09 (DaijiworldNews/PY): ನರೇಂದ್ರ ಮೋದಿ ಕ್ಯಾಬಿನೆಟ್ನಲ್ಲಿ ಸ್ಥಾನಪಡೆದ ಜ್ಯೋತಿರಾದಿತ್ಯ ಸಿಂಧಿಯಾ ಈಗ ನಾಗರಕ ವಿಮಾನಯಾನ ಸಚಿವ. ಆದರೆ, ಇದರ ಬೆನ್ನಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಅವರ ಫೇಸ್ ಬುಕ್ ಖಾತೆ ಹ್ಯಾಕ್ ಆಗಿದೆ.
ಜ್ಯೋತಿರಾದಿತ್ಯ ಸಿಂಧಿಯಾ ಅವರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಅವ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಸಿಂಧಿಯಾ ಅವರು ಕಾಂಗ್ರೆಸ್ನಲ್ಲಿದ್ದ ಸಂದರ್ಭ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿರುವ ವಿಡಿಯೋವೊಂದನ್ನು ಅವರ ಫೇಸ್ಬುಕ್ ಖಾತೆಯಲ್ಲಿ ಹ್ಯಾಕರ್ಗಳು ಅಪ್ಲೋಡ್ ಮಾಡಿದ್ದಾರೆ.
ಇದೀಗ ಆ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಮಾಜಿ ಶಾಸಕ ರಮೇಶ್ ಅಗರ್ವಾಲ್ ಅವರು ನೀಡಿದ ದೂರಿನಂತೆ ಗ್ವಾಲಿಯರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಳೆದ ಮಾರ್ಚ್ನಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿದ್ದರು. ಬಳಿಕ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು.