ಚಾಮರಾಜನಗರ, ಜು 09 (DaijiworldNews/PY): ಟ್ರ್ಯಾಕ್ಟರ್ ಹರಿದು ಗಾಯಗೊಂಡಿದ್ದ 5 ವರ್ಷದ ಬಾಲಕ ಮೃತಪಟ್ಟ ವಿಚಾರ ಕೇಳಿ ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಸವಕನಪಾಳ್ಯದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಚಾಲಕನನ್ನು ಸುನಿಲ್ (23) ಎಂದು ಗುರುತಿಸಲಾಗಿದೆ. ಈತ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ 5 ವರ್ಷದ ಬಾಲಕ ಗಂಭೀರಗಾಯಗೊಂಡು ಸಾವನ್ನಪ್ಪಿದ್ದಾನೆ.
ಸವಕನಪಾಳ್ಯ ಕ್ರಿಕೆಟ್ ಆಡಲು ಮೈದಾನ ಸಮತಟ್ಟು ಮಾಡುವ ಕೆಲಸ ನಡೆಯುತ್ತಿತ್ತು. ಈ ವೇಳೆ ನಿಂತಿದ್ದ ಟ್ರಾಕ್ಟರ್ ಅನ್ನು ಸುನೀಲ್ ಚಲಾಯಿಸಿದ್ದಾರೆ. ಈ ವೇಳೆ ಮೈದಾನದ ಅಂಚಿನಲ್ಲಿದ್ದ ಬಾಲಕನ ಮೇಲೆ ಟ್ರಾಕ್ಟರ್ ಹರಿದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಕೂಡಲೇ ಬಾಲಕನನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ದಾರಿ ಮಧ್ಯೆ ಬಾಲಕ ಸಾವನ್ನಪ್ಪಿದ್ದಾನೆ.
ಘಟನೆಯ ಬಳಿ ಸುನೀಲ್ ಮೈಸೂರಿನಲ್ಲಿರುವ ವ್ಯಕ್ತಿಯೊಬ್ಬರ ಮನೆಗೆ ತಲುಪಿದ್ದ, ಈ ವೇಳೆ ಬಾಲಕನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮನನೊಂದ ಸುನೀಲ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಯ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.