ನವದೆಹಲಿ, ಜು 09 (DaijiworldNews/PY): ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 43,393 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,07,52,950ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 911 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಒಟ್ಟು 3,07,52,950 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 44,459 ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು 2,98,88,284 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 4,58,727 ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಗುರುವಾರ 17,90,708 ಮಂದಿಗೆ ಕೊರೊನಾ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಇಲ್ಲಿಯವರೆಗೆ 42,70,16,605 ಮಂದಿಗೆ ಕೊರೊನಾ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. 36,48,47,549 ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.