ಮೈಸೂರು, ಜು.09 (DaijiworldNews/HR): ಸಿದ್ದರಾಮಯ್ಯ ಮತ್ತು ಪರಮೇಶ್ವರ ಇಬ್ಬರೂ ಒಬ್ಬರನ್ನೊಬ್ಬರು ಸೋಲಿಸಲು ಪ್ರಯತ್ನ ಮಾಡಿಲ್ಲವೆಂದು ಆಣೆ ಮಾಡಿ ಹೇಳಲಿ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಸವಾಲೆಸೆದಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಐದು ಜನ ಸ್ವಯಂ ಘೋಷಿತ ಮುಖ್ಯಮಂತ್ರಿಗಳಿದ್ದಾರೆ. ಚುನಾವಣೆ ನಡೆಯಲೂ ಇನ್ನೂ ಒಂದೂವರೆ ವರ್ಷವಿದೆ. ಒಂದೊಂದು ಸಮುದಾಯಕ್ಕೆ ಒಬ್ಬೊಬ್ಬ ನಾಯಕ ಸಿಎಂ ಆಗಬೇಕು ಎಂದು ಘೋಷಣೆ ಮಾಡಿಕೊಳ್ಳುತ್ತಿದ್ದಾರೆ" ಎಂದರು.
ಇನ್ನು "17 ಮಂದಿ ಮತ್ತೆ ಕಾಂಗ್ರೆಸ್ಗೆ ಸೇರಿಕೊಳ್ಳುವ ವಿಚಾರದಲ್ಲಿ ಡಿ ಕೆ ಶಿವಕುಮರ್, ಸಿದ್ದರಾಮಯ್ಯ ನಡುವೆ ಕಿತ್ತಾಟ ನಡೆಯುತ್ತಿದ್ದು ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಅಸ್ತಿತ್ವವೇ ಇಲ್ಲ. ನಿಮ್ಮ ಪಕ್ಷ ನಿಮ್ಮ ಶಾಸಕರನ್ನ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಕ್ಕೂ ಕಾಂಗ್ರೆಸ್ ಬರಲ್ಲ" ಎಂದು ಟೀಕಿಸಿದ್ದಾರೆ.