ನವದೆಹಲಿ, ಜು.09 (DaijiworldNews/HR): ಭಾರತದಾದ್ಯಂತ ಕೊರೊನಾ ಲಸಿಕೆ ಅಭಿಯಾನ ಚುರುಕುಗೊಂಡಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ 1.70 ಕೋಟಿಗೂ ಅಧಿಕ ಡೋಸ್ ಕೊರೊನಾ ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕೇಂದ್ರವು ಈವರೆಗೆ ರಾಜ್ಯಗಳಿಗೆ 38.18 ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 1,70,19,854 ಡೋಸ್ ಕೊರೊನಾ ಲಸಿಕೆಗಳಿವೆ ಎಂದು ಹೇಳಿದೆ.
ಇನ್ನು ಶುಕ್ರವಾರ ಲಭ್ಯವಿರುವ ಮಾಹಿತಿಯ ಪ್ರಕಾರ, ತ್ಯಾಜ್ಯಗಳು ಸೇರಿದಂತೆ ಒಟ್ಟು 36,48,77,756 ಪ್ರಮಾಣದಷ್ಟು ಲಸಿಕೆಗಳು ಬಳಕೆಯಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ 23,80,080 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.