ನವದೆಹಲಿ, ಜು 09 (DaijiworldNews/PY): "ವೈಯುಕ್ತಿಕ ಸಂರಕ್ಷಣಾ ಮಸೂದೆ ಜಾರಿಗೆ ಬರುವವರೆಗೆ ಹೊಸ ಗೌಪ್ಯತೆ ನೀತಿಯನ್ನು ತಡೆಹಿಡಿಯಲಾಗಿದೆ ಎಂದು ಬಳಕೆದಾರರನ್ನು ಹೊಸ ಗೌಪ್ಯತೆ ನೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವುದಿಲ್ಲ" ಎಂದು ಫೇಸ್ ಬುಕ್ ಮಾಲೀಕತ್ವದ ಮೆಸೇಜಿಂಗ್ ಪ್ಲಾಟ್ ಫಾರ್ಮ್ ವಾಟ್ಸಪ್ ದೆಹಲಿ ಹೈಕೋರ್ಟ್ಗೆ ತಿಳಿಸಿದೆ.
ವಾಟ್ಸಾಪ್ನ ಹೊಸ ಗೌಪ್ಯತೆ ನೀತಿಯ ಕುರಿತು ತನಿಖೆ ನಡೆಸುವಂತೆ ಭಾರತದ ಸ್ಪರ್ಧಾ ಆಯೋಗ ಸಿಸಿಐ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಫೇಸ್ ಬುಕ್ ಹಾಗೂ ವಾಟ್ಸಾಪ್ ದೆಹಲಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರಿದ್ದ ಪೀಠ ಶುಕ್ರವಾರ ಈ ಅರ್ಜಿಯನ್ನು ವಿಚಾರಣೆ ನಡೆಸಿದೆ. ಈ ಸಂದರ್ಭ ಫೇಸ್ಬುಕ್ ಒಡೆತನದ ವಾಟ್ಸಾಪ್ ಹೇಳಿಕೆ ನೀಡಿದ್ದು, "ವೈಯುಕ್ತಿಕ ಸಂರಕ್ಷಣಾ ಮಸೂದೆ ಜಾರಿಗೆ ಬರುವವರೆಗೆ ಹೊಸ ಗೌಪ್ಯತೆ ನೀತಿಯನ್ನು ತಡೆಹಿಡಿಯಲಾಗಿದೆ ಎಂದು ಬಳಕೆದಾರರನ್ನು ಹೊಸ ಗೌಪ್ಯತೆ ನೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವುದಿಲ್ಲ" ಎಂದಿದೆ.
ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ವಾಟ್ಸಾಪ್ ಪರ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದು, "ಹೊಸ ನೀತಿಯನ್ನು ತಡೆ ಹಿಡಿಯಲು ತೀರ್ಮಾನಿಸಲಾಗಿದ್ದು, ಬಳಕೆದಾರರನ್ನು ಹೊಸ ಗೌಪ್ಯತೆ ನೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವುದಿಲ್ಲ. ಆದರೆ, ಬಳಕೆದಾರರಿಗೆ ನವೀಕರಣವನ್ನು ತೋರಿಸುವುದನ್ನು ಮುಂದುವರಿಸುತ್ತದೆ" ಎಂದು ತಿಳಿಸಿದ್ದಾರೆ.
"ಹೊಸ ಗೌಪ್ಯತೆ ನೀತಿಯನ್ನಿ ಒಪ್ಪಿಕೊಳ್ಳದವರ ವಾಟ್ಸಾಪ್ ಬಳಕೆಯನ್ನು ಮಿತಿಗೊಳಿಸುವುದಿಲ್ಲ" ಎಂದಿದ್ದಾರೆ.