ಬೆಂಗಳೂರು, ಜು.09 (DaijiworldNews/HR): ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕವಾಗಿರುವ ತಾವರ್ಚಂದ್ ಗೆಹ್ಲೋಟ್ ಅವರು ಜುಲೈ 11ರಂದು ಬೆಳಿಗ್ಗೆ ರಾಜ ಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.
ಇನ್ನು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವರಾಗಿದ್ದ ತಾವರ್ಚಂದ್ ಅವರು ಇತ್ತೀಚೆಗಷ್ಟೇ ರಾಜಸಭೆ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು ಎನ್ನಲಾಗಿದೆ.