ನವದೆಹಲಿ, ಜು.09 (DaijiworldNews/HR): ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿ ಜೋತಿರಾದಿತ್ಯ ಸಿಂಧಿಯಾ ಹಾಗೂ ಸಹಾಯಕ ಸಚಿವರಾಗಿ ಜನರಲ್ ವಿ.ಕೆ.ಸಿಂಗ್ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ಬಿಜೆಪಿಗೆ ಸೇರಿದ್ದು, ಬಳಿಕ ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿದ್ದು, ಬುಧವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಇನ್ನು ಕೊರೊನಾದಿಂದಾಗಿ ನಾಗರಿಕ ವಿಮಾನಯಾನ ಕ್ಷೇತ್ರವು ಹಲವು ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಸಿಂಧಿಯಾ ಆ ಇಲಾಖೆಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಜೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ದೂರಸಂಪರ್ಕ, ವಾಣಿಜ್ಯ ಮತ್ತು ಕೈಗಾರಿಕೆ, ಇಂಧನ ಖಾತೆಯ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.