ಬೆಂಗಳೂರು, ಜು. 09 (DaijiworldNews/SM): ಕರಾವಳಿಯ ಕೊಬ್ಬರಿಗೆ ಬೆಲೆ ಕುಸಿತವಾಗಿರುವ ಬಗ್ಗೆ ಕಳೆದ ಹಲವು ವರ್ಷಗಳಿಂದ ಕೂಗು ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಯ ಕೊಬ್ಬರಿಗೆ ಅಂತರಾಷ್ಟ್ರೀಯ ಮಾರುಕಟ್ಟೆ ಕಲ್ಪಿಸಲಾಗಿದೆ.
ಈ ಬಗ್ಗೆ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಕೊಬ್ಬರಿ ದರ ಕುಸಿತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುದ್ದು, ಪ್ರಧಾನಿ ನರೇಂದ್ರ ಮೋದಿ ರೈತರ ಹಿತ ಕಾಪಾಡಲು ಸಿದ್ಧವಾಗಿದ್ದಾರೆ.
ಇಲ್ಲಿಯ ತನಕ ದೇಶದಲ್ಲಿ ಮಾತ್ರ ಕೊಬ್ಬರಿಗೆ ಮಾರುಕಟ್ಟೆ ಇತ್ತು. ಆದರೆ, ಇನ್ನು ಮುಂದೆ ಕೊಬ್ಬರಿ ವಿದೇಶಕ್ಕೆ ರಫ್ತು ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಮತ್ತೊಂದೆಡೆ ಕೊಬ್ಬರಿ ನಿಗಮಕ್ಕೆ ಇನ್ನು ಮುಂದೆ ರೈತರ ಮಕ್ಕಳಿಗೂ ಅಧ್ಯಕ್ಷರಾಗುವ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.