ನವದೆಹಲಿ, ಜು 10 (DaijiworldNews/PY): ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 42,766 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,07,95,716ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕೊರೊನಾ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,206 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು 4,07,145 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 45,254 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಒಟ್ಟು 2,99,33,538 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ ಒಟ್ಟು 4,55,033 ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಒಂದೇ 19,55,225 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು,ಈವರೆಗೆ ಒಟ್ಟು42,90,41,970 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 36,89,91,222 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.