ಬೆಂಗಳೂರು, ಜು.10 (DaijiworldNews/HR): ಕೊರೊನಾ ಸೋಂಕು ಕೊಂಚ ಮಟ್ಟಿಗೆ ತಗ್ಗುತ್ತಿದ್ದಂತೆ ಇತ್ತ ರಾಜ್ಯಕ್ಕೆ ಝಿಕಾ ವೈರಸ್ ಆತಂಕ ಎದುರಾಗಿದ್ದು, ಝಿಕಾ ವೈರಸ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಝಿಕಾ ವೈರಸ್ ಪ್ರಕರಣಗಳು ಕಡಿಮೆ ಇದ್ದು, ಆತಂಕ ಪಡುವ ಅಗತ್ಯವಿಲ್ಲ. ಝಿಕಾ ವೈರಸ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ" ಎಂದಿದ್ದಾರೆ.
ಇನ್ನು "ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಝಿಕಾ ವೈರಸ್ ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಬಹುದಾಗಿದೆ" ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರವೇ ರಾಜ್ಯಗಳಿಗೆ ಲಸಿಕೆ ಹಂಚಿಕೆ ಮಾಡಲು ನಿರ್ಧರಿಸಿದ್ದು, ಖಾಸಗಿಯವರಿಗೆ ಶೇ. 25 ರಷ್ಟು ಮಾರಾಟ ಮಾಡಲು ಕಂಪನಿಗಳಿಗೆ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.