ಕಲಬುರಗಿ, ಜು.10 (DaijiworldNews/HR): ಸಂಪುಟ ವಿಸ್ತರಣೆಯ ಯಾವುದೇ ಪ್ರಸ್ತಾಪವು ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಚಿವ ಸಂಪುಟ ವಿಸ್ತರಣೆ, ಪುನಾರಚನೆಯ ಯಾವುದೇ ಚಿಂತನೆಗಳು ಕೂಡ ರಾಜ್ಯ ಸರ್ಕಾರದ ಮುಂದಿಲ್ಲ. ಅದರ ಬದಲಾಗಿ ಕೊರೊನಾದ ಮೂರನೇ ಅಲೆ ಆರಂಭವಾಗುವ ಸಾಧ್ಯತೆಗಳಿದ್ದು, ಅದನ್ನು ತಡೆಯಲು ಕ್ರಮಗಳನ್ನು ಕೈಗೊಳ್ಳಬೇಕು ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನೂ ನಡೆಸಬೇಕಿದೆ" ಎಂದರು.
ಇನ್ನು ಕೇಂದ್ರ ಸಂಪುಟದಲ್ಲಿ ರಾಜ್ಯದ ನಾಲ್ವರು ನಾಯಕರಿಗೆ ಸ್ಥಾನ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಬಿಎಸ್ವೈ, ಮಂಡ್ಯ ಸಂಸದೆ ಸುಮಲತಾ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ನಡುವಿನ ವಾಕ್ಸಮರದ ಕುರಿತ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.