ಜಮ್ಮು-ಕಾಶ್ಮೀರ, ಜು.10 (DaijiworldNews/HR): ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ಗೆ ಇಬ್ಬರು ಉಗ್ರರು ಹತ್ಯೆಗೀಡಾಗಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿರುವುದಾಗಿ ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಉಗ್ರರು ಅನಂತ್ ನಾಗ್ ಜಿಲ್ಲೆಯ ಕವರಿಗಾಮ್ ಪ್ರದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದಾಗ, ಗುಂಡಿನ ಚಕಮಕಿ ಆರಂಭವಾಗಿತ್ತು.
ಇನ್ನು ಉಗ್ರರು ಅಡಗಿರುವ ಸ್ಥಳವನ್ನು ಸುತ್ತುವರೆದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಭದ್ರತಾ ಪಡೆಯ ಪ್ರತಿದಾಳಿಗೆ ಇಬ್ಬರು ಉಗ್ರರು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.