ಮೈಸೂರು, ಜು 11 (DaijiworldNews/PY): ವಿಕೃತಕಾಮಿಯೋರ್ವ ವಿಶೇಷಚೇತನ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮೈಸೂರಿನ ಕೆಆರ್ ಆಸ್ಪತ್ರೆಯ ವಿಶೇಷ ಚೇತನರ ವಾರ್ಡ್ನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಕಳೆದ ಮೂರ್ನಾಲ್ಕು ವರ್ಷಗಳಿಂದ ಕೆ.ಆರ್ ಆಸ್ಪತ್ರೆಯ ವಾರ್ಡ್ನಲ್ಲಿ 37 ವರ್ಷದ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಸರಿಯಾಗಿ ಮಾತನಾಡಲು ಆಗುತ್ತಿರಲಿಲ್ಲ. ಕಳೆದ ಶನಿವಾರ ವಿಕೃತಕಾಮಿಯೋರ್ವ ಕಿಟಕಿ ಗ್ರಿಲ್ ಮುರಿದು ಒಳನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ವಾರ್ಡ್ನಲ್ಲಿದ್ದ ವೃದ್ಧೆ ಆಸ್ಪತ್ರೆ ಸಿಬ್ಬಂದಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.
ಮಾನವ ಹಕ್ಕುಗಳ ಸೇವಾ ಸಮಿತಿಯವರ ಬಳಿ ವೃದ್ದೆ ಈ ಬಗ್ಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರಿಗೆ ವಿಷಯ ತಿಳಿಸಲಾಗಿದೆ. ಆಸ್ಪತ್ರೆಯ ವಾರ್ಡ್ಗೆ ಭೇಟಿ ನೀಡಿ ದೇವರಾಜ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪ ನಿರ್ದೇಶಕಿ ಗೀತ ಲಕ್ಷ್ಮೀ ಅವರು ಕೂಡಾ ಆಸ್ಪತ್ಎಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗೆ ಮಾಹಿತಿ ನೀಡಿದ್ದಾರೆ.