ನವದೆಹಲಿ, ಜು 11 (DaijiworldNews/PY): ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 41,506 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,08,37,222ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 895 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 4,08,040 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 41,526 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2,99,75,064 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 4,54,118 ಕೊರೊನಾಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನು ಭಾರತದಲ್ಲಿ ಒಂದೇ 18,43,500 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೆ ಒಟ್ಟು 43,08,85,470 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
ಲಸಿಕೆ ಅಭಿಯಾನ ಆರಂಭವಾಗಿ ಈವರೆಗೆ ಒಟ್ಟು 37,60,32,586 ಮಂದಿಗೆ ಕೊರೊನಾ ಲಸಿಕೆನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.