ಬೆಂಗಳೂರು, ಜು.11 (DaijiworldNews/HR): ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ನಡುವಿನ ವಾಕ್ಸಮರ ಪ್ರತಿಭಟನೆ ಸ್ವರೂಪ ಪಡೆದಿದೆ.
ಈ ಕುರಿತು ಸಂಸದೆ ಸುಮಲತಾ ಇಂದು ಮತ್ತೊಂದು ಟ್ವೀಟ್ ಮಾಡಿದ್ದು, "ಬೇರೆಯವರಿಗೆ ಗಂಧವನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಗಂಧವಾಗುತ್ತದೆ. ಬೇರೆಯವರಿಗೆ ಕೆಸರನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ" ಎಂದಿದ್ದಾರೆ.
ಇನ್ನು "ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿದ್ದು, ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹು ದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ. ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ" ಎಂದು ಕುಮಾರಸ್ವಾಮಿ ಅವರು ಅಭಿಮಾನಿಗಳಿಗೆ ಕರೆ ನೀಡಿದ್ದರು.