ಬೆಂಗಳೂರು, ಜು.11 (DaijiworldNews/HR): ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಂತ ಥಾವರ್ ಚಂದ್ ಗೆಹ್ಲೋಟ್ ಅವರು 19 ರಾಜ್ಯಪಾಲರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕರ್ನಾಟಕದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಅವರು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ರಾಜ್ಯಪಾಲರಿಗೆ ಪ್ರಮಾಣ ವಚನ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದು, ಕರ್ನಾಟಕದ 19 ನೇ ರಾಜ್ಯಪಾಲರಾಗಿ ಗೆಹ್ಲೋಟ್ ದೇವರ ಹೆಸರಿನಲ್ಲಿ ಪದಗ್ರಹಣ ಸ್ವೀಕಾರ ಮಾಡಿದ್ದಾರೆ.
ನಿರ್ಗಮಿತ ರಾಜ್ಯಪಾಲ ವಿ.ಆರ್.ವಾಲಾ ಅವರು ಥಾವರ್ ಚಂದ್ ಗೆಹ್ಲೋಟ್ಗೆ ಅಧಿಕಾರ ಹಸ್ತಾಂತರ ಮಾಡಿದ್ದು, ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಹೈಕೋರ್ಟ್ ಸಿಜೆ ಎ.ಎಸ್.ಒಕಾ, ಸಿಎಂ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಡಿಸಿಎಂ ಕಾರಜೋಳ, ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ, ಸಚಿವರಾದ ಬಸವರಾಜ ಬೊಮ್ಮಾಯಿ, ಕೆ.ಸುಧಾಕರ್, ಆರ್.ಅಶೋಕ್, ಸಂಸದೆ ಸುಮಲತಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.