ನವದೆಹಲಿ, ಜು.11 (DaijiworldNews/HR): ರಾಮಮಂದಿರಕ್ಕೆ ಸಂಬಂಧಿಸಿದ ವ್ಯವಹಾರಗಳನ್ನು ನೋಡಿಕೊಳ್ಳಲು ಆರ್ಥಿಕ ಮತ್ತು ಕಾನೂನು ಸಲಹಾ ಸಮಿತಿಗಳನ್ನು ರಚಿಸಲಾಗುವುದು ಎಮ್ದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹೇಳಿದೆ.
ರಾಮಮಂದಿರ ನಿರ್ಮಾಣ ಕಾರ್ಯ ಅಯೋಧ್ಯೆಯಲ್ಲಿ ನಡೆಯುತ್ತಿದ್ದು, ಈ ನಡುವೆ ಶ್ರೀರಾಮ ಜನ್ಮಭೂಮಿ ಕ್ಷೇತ್ರ ಟ್ರಸ್ಟ್ ಮಾರ್ಚ್ ನಲ್ಲಿ ಹೆಚ್ಚುವರಿ ಭೂಮಿಯನ್ನು ಖರೀದಿಸಿದ್ದರ ಬಗ್ಗೆ ಕಾಂಗ್ರೆಸ್, ಆಪ್, ಸಮಾಜವಾದಿ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿ, ಇಲ್ಲಿ ಅಕ್ರಮ ನಡೆದಿದೆ ಎಂದು ಸಿಬಿಐ ತನಿಖೆಗೂ ಒತ್ತಾಯಿಸಿದ ಬೆನ್ನಲ್ಲೇ ಶ್ರೀ ರಾಮಜನ್ಮಭೂಮಿ ಕ್ಷೇತ್ರ ಟ್ರಸ್ಟ್ ಮಹತ್ವದ ನಿರ್ಧಾರ ಪ್ರಕಟಿಸಿದೆ ಎನ್ನಲಾಗಿದೆ.
ಶ್ರೀರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಖರೀದಿ ಮಾಡುವಾಗ ಅಕ್ರಮ ನಡೆದಿದೆ ಎಂದು ಆರೋಪ ಮಾಡಲಾಗಿದ್ದು, ಇದರಲ್ಲಿ ಚಂಪತ್ ರಾಯ್ ರನ್ನು ನೇರವಾಗಿ ಹೊಣೆ ಮಾಡಲಾಗುತ್ತಿದೆ. ಹೀಗಾಗಿ ಚಂಪತ್ ರಾಯ್ ರನ್ನು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ತೆಗೆಯಲಾಗುತ್ತದೆ ಎಂಬ ಮಾತುಗಳೂ ಕೇಳಿ ಬಂದಿದ್ದವು.
ಇನ್ನು ಮಂದಿರ ನಿರ್ಮಾಣ ಕಾರ್ಯದಲ್ಲಿ ಚಂಪತ್ ರಾಯ್ ಸಕ್ರಿಯರಾಗಿದ್ದು, ಅವರನ್ನು ನೇಮಕ ಮಾಡಿದ್ದು ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.