ನವದೆಹಲಿ, ಜು. 12 (DaijiworldNews/HR): ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 37,154 ಜನರಿಗೆ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 3,08,74,376ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, "ದೇಶದಲ್ಲಿ ಕಳೆದ 24 ಗಂಟೆಯಲ್ಲಿ 724 ಸೋಂಕಿಗೆ ಬಲಿಯಾಗಿದ್ದು, ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,08,764ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 4,50,899 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 41,526 ಜನರು ಗುಣಮುಖರಾಗಿದ್ದು, ಈವರೆಗೆ 3,00,14,713 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 12,35,287 ಜನರಿಗೆ ಕೊರೊನಾ ವ್ಯಾಕ್ಸಿನ್ ಹಾಕಲಾಗಿದ್ದು, ಈವರೆಗೆ ಒಟ್ಟು 37,73,52,501 ಮಂದಿಗೆ ಲಸಿಕೆ ನೀಡಲಾಗಿದೆ.