ಜೈಪುರ, ಜು. 12 (DaijiworldNews/HR): 12ನೇ ಶತಮಾನದ ಅಮೆರ್ ಪ್ಯಾಲೆಸ್ನಲ್ಲಿ ಸಿಡಿಲು ಬಡಿದು 11 ಜನರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಮಳೆಯ ನಡುವೆಯೇ ಅಮೆರ್ ಪ್ಯಾಲೆಸ್ನ ವಾಚ್ ಟವರ್ ಮೇಲೆ ಜನರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ ಈ ಘಟನೆ ಸಂಭವಿಸಿದೆ.
ಈ ಕುರಿತು ಮಾಹಿತಿ ನೀಡಿರುವ ರಾಜಸ್ಥಾನ ಪೊಲೀಸರು, "ಡಿಲು ಬಡಿದ ಸಂಧರ್ಭದಲ್ಲಿ ವಾಚ್ ಟವರ್ ಮೇಲೆ 27 ಜನರು ಇದ್ದರು ಎನ್ನಲಾಗಿದ್ದು, ಸಿಡಿಲು ಬಡಿದ ಭಯಕ್ಕೆ ವಾಚ್ ಟವರ್ ಮೇಲಿಂದ ಧುಮುಕಿ ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಘಟನೆ ಬಗ್ಗೆ ಸಂತಾಪ ಸೂಚಿಸಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.