ಧಾರವಾಡ, ಜು. 12 (DaijiworldNews/HR): ಕರ್ನಾಟಕದ ಮುಖ್ಯಮಂತ್ರಿ ವಿಚಾರದಲ್ಲಿ ಅನೇಕ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಇದೀಗ ಸಚಿವ ಉಮೇಶ ಕತ್ತಿ ಕೂಡ ಇದೀಗ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎಂಟು ಬಾರಿ ನಾನೂ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆರು ಇಲಾಖೆಗಳಲ್ಲಿ ಸಚಿವನಾಗಿ ಕೆಲಸ ಮಾಡಿರುವ ಅನುಭವ ನನಗಿದೆ. ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗಿದ್ದು, ಯಾವುದೇ ಕಪ್ಪು ಚುಕ್ಕೆ ಇಲ್ಲ. ಮುಖ್ಯಮಂತ್ರಿಯಾಗಲು ಆಸೆ ನನಗೂ ಇದ್ದೇ ಇದೆ" ಎಂದರು."
ಇನ್ನು ಮುಖ್ಯಮಂತ್ರಿ ಬಳಿಕ ಪ್ರಧಾನಮಂತ್ರಿ ಆಗುವ ಆಸೆ ಇದ್ದೇ ಇರುತ್ತದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆದರೆ, ನಾನು ಉತ್ತರ ಕರ್ನಾಟಕದ ಜನರನ್ನು ಎಬ್ಬಿಸಬೇಕಾಗುತ್ತದೆ" ಎಂದಿದ್ದಾರೆ.
ಉತ್ತರ ಕರ್ನಾಟಕದ ಭಾಗಕ್ಕೆ ಅನ್ಯಾಯ ಆದರೆ, ಉತ್ತರ ಕರ್ನಾಟಕವನ್ನು ಪ್ರತ್ಯೇಕವಾಗಿ ಕಟ್ಟಬೇಕಾಗುತ್ತದೆ. ಈ ಬಾರಿ ಉತ್ತರ ಕರ್ನಾಟಕ ಭಾಗಕ್ಕೆ ಮುಖ್ಯಮಂತ್ರಿ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಹೇಳಿದ್ದಾರೆ.