ನವದೆಹಲಿ, ಜು. 12 (DaijiworldNews/HR): ದೇಶದಲ್ಲಿ ಪೆಟ್ರೋಲ್ ಬೆಲೆ ಏರಿಯಾಗಿದ್ದು, ಅದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಪೆಟ್ರೋಲ್ ಬೆಲೆ ಏರಿಕೆಯಿಂದ ದೇಶಕ್ಕೆ ದೊಡ್ಡ ಸಮಸ್ಯೆಯನ್ನು ತಂದೊಡ್ಡಿದ್ದು, ಇದರಿಂದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಆ ನಿಟ್ಟಿನಲ್ಲಿ ಗ್ರಾಹಕರು ಇನ್ನು ಪೆಟ್ರೋಲ್ ಬಂಕ್ ಬೇಕೋ ಅಥವಾ ನೈಸರ್ಗಿಕ ಅನಿಲ ಬೇಕೋ ಎಂಬ ಆಯ್ಕೆಯನ್ನು ಮಾಡಿಕೊಳ್ಳಬೇಕಾಗಿದೆ" ಎಂದರು.
ಇನ್ನು ಭಾರತದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 110 ರೂಪಾಯಿಗೆ ಏರಿಕೆಯಾಗಿದ್ದು, ಎಥಾನಾಲ್ ಪ್ರತಿ ಲೀಟರ್ ಬೆಲೆ 60 ರೂಪಾಯಿಗೆ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.
ಇಂದು ಪೆಟ್ರೋಲ್ ದರ 25ರಿಂದ 35 ಪೈಸೆಯಷ್ಟು ಏರಿಕೆಯಾಗಿದ್ದು, ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 101.23 ರೂಪಾಯಿಗೆ ಏರಿಕೆಯಾಗಿ ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟಿದೆ.