ಬೆಂಗಳೂರು, ಜು 12 (DaijiworldNews/PY): ಗಣಿ ಮತ್ತು ಭೂ ವಿಜ್ಞಾನ ಸಚಿವರಾಗಿರುವ ಮುರುಗೇಶ್ ನಿರಾಣಿ ಅವರನ್ನು ಸೋಮವಾರ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಸಚಿವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಈ ಸಂದರ್ಭ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಸಲ್ಲಿಕೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕಳೆದ ಹಲವು ದಿನಗಳಿಂದ ಕೆಆರ್ಎಸ್ ವಿಚಾರವಾಗಿ ಹಾಗೂ ಅಕ್ರಮ ಗಣಿಗಾರಿಕೆ ವಿಚಾರವಾಗಿ ಸುಮಲತಾ ಅಂಬರೀಶ್ ಅವರು ಸುದ್ದಿಯಲ್ಲಿದ್ದಾರೆ. ಅಲ್ಲದೇ ಅಕ್ರಮ ಗಣಿಗಾರಿಗೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಹೆಚ್ಡಿ.ಕುಮಾರಸ್ವಾಮಿ ಹಾಗೂ ಸುಮಲತಾ ಅವರ ನಡುವೆ ವಾಕ್ಸಮರ ಏರ್ಪಟ್ಟಿತ್ತು. ಇವೆಲ್ಲದರ ನಡುವೆ ಸುಮಲತಾ ಅವರು ಸಚಿವ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.