ಮುಂಬೈ, ಜು.13 (DaijiworldNews/HR): ಮಾಲಾಡ್ ಪ್ರದೇಶದ ನೌಕಾ ನೆಲೆಯ ಐಎನ್ಎಸ್ ಹಮ್ಲಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಶೆಡ್ನ ಭಾಗವೊಂದು ಕುಸಿದ ಪರಿಣಾಮ 11 ಮಂದಿ ಕಾರ್ಮಿಕರಿಗೆ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೋಮವಾರ ಸಂಜೆ ಈ ಘಟನೆ ನಡೆದಿದ್ದು ಗಾಯಾಳುಗಳನ್ನು ನೌಕಾ ನೆಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.
ಇನ್ನು 10 ಮಂದಿ ಚಿಕಿತ್ಸೆ ಪಡೆದು ಈಗಾಗಲೇ ಆಸ್ಪತ್ರೆಯಿಂದ ಮನೆಗೆ ಹೋಗಿದ್ದು, ಇನ್ನೊಬ್ಬರನ್ನು ಟ್ರೈಡೆಂಟ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.