ಬೆಂಗಳೂರು, ಜು.13 (DaijiworldNews/HR): ರಾಜ್ಯದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದಕ್ಕಾಗಿ ಕರ್ನಾಟಕದಲ್ಲಿ ಕೂಡ ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಕಡಿಮೆ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ" ಎಂದಿದ್ದಾರೆ.
ಇನ್ನು ಉತ್ತರ ಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಪಡೆಯುವವರು ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಂತಿಲ್ಲ ಮತ್ತು ಅಂತಹವರಿಗೆ ಸರ್ಕಾರಿ ಸೌಲಭ್ಯ ಸಿಗುವುದಿಲ್ಲ ಎಂದು ನಿಯಮ ಜಾರಿಯಲಿದ್ದು, ಜನಸಂಖ್ಯಾ ನೀತಿ ಜಾರಿಗೆ ಮುಂದಾಗಿದ್ದು, ಕರಡನ್ನು ಜನರ ಚರ್ಚೆಗೆ ನೀಡಲಾಗಿದೆ.