ನವದೆಹಲಿ, ಜು.13 (DaijiworldNews/HR): ಕೆಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಳವಾಗುತ್ತಿದ್ದು, ಜನರು ಮಾಸ್ಕ್ ಧರಿಸದೇ ಗುಂಪುಗೂಡುತ್ತಿರುವುದು ಕಳವಳಕಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎಂಟು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಕೊರೊನಾ ಪರಿಸ್ಥಿತಿಯ ಕುರಿತು ವರ್ಚುವಲ್ ಮೂಲಕ ಮಾತುಕತೆ ನಡೆಸಿ ಮಾತನಾಡಿದ ಅವರು, ಕೆಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದು ಆತಂಕಕಾರಿಯಾಗಿದ್ದು, ಕೊರೊನಾ ಮತ್ತಷ್ಟು ಹರಡದಂತೆ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ" ಎಂದರು.
ಇನ್ನು "ಕೊರೊನಾದಿಂದಾಗಿ ಪ್ರವಾಸೋದ್ಯಮ, ವ್ಯವಹಾರದ ಮೇಲೆ ಹೆಚ್ಚು ಪರಿಣಾಮ ಬೀರಿದ್ದು, ಈಶಾನ್ಯ ರಾಜ್ಯಗಳಲ್ಲಿ ಮಾರುಕಟ್ಟೆ ಮತ್ತು ಪ್ರವಾಸಿ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಜನಸಂದಣಿ ಸೇರುವುದು ಕಳವಳಕಾರಿ ಬೆಳವಣಿಗೆಯಾಗಿದೆ" ಎಂದಿದ್ದಾರೆ.
ಈ ಎಲ್ಲಾ ಹಿನ್ನಲೆಯಲ್ಲಿ ಕೊರೊನಾವು ವೇಗವಾಗಿ ಹರಡದಂತೆ ಕಠಿಣ ನಿಮಯಗಳನ್ನು ಜಾರಿಗೊಳಿಸಬೇಕಾದ ಅಗತ್ಯವಿದೆ ಎಂದು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಮಣಿಪುರ, ಮಿಜೋರಾಂ, ನಾಗಲ್ಯಾಂಡ್, ತ್ರಿಪುರಾ ಮತ್ತು ಸಿಕ್ಕಿಂ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.