ಬೆಂಗಳೂರು, ಜು 14 (DaijiworldNews/PY): "ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದೇ ತೀರ್ಮಾನ ಕೈಗೊಂಡಿಲ್ಲ" ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಈ ಬಗ್ಗೆ ರಾಜ್ಯದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರಕ್ಕೆ ಪ್ರತಿಕರಿಯೆ ನೀಡಿ ಪತ್ರ ಬರೆದಿರುವ ಅವರು, "ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ. ಉಭಯ ರಾಜ್ಯಗಳ ನಡುವಿನ ಸೌಹಾರ್ದತೆಯನ್ನು ಉಳಿಸುವ ಹಾಗೂ ಬೆಳೆಸುವ ಕುರಿತು ತಾವು ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ನಾವು ಗೌರವಿಸುತ್ತೇವೆ" ಎಂದಿದ್ದಾರೆ.
"ಕೊರೊನಾ ಕಾರಣದಿಂದ ನಮ್ಮ ರಾಜ್ಯದ ಎಲ್ಲಾ ಶಾಲೆಗಳನ್ನು ಮುಚ್ಚಲಾಗಿದ್ದು, ಸದ್ಯಕ್ಕೆ ಆನ್ಲೈನ್ ತರಗತಿಗಳು ನಡೆಯುತ್ತಿವೆ. ಸ್ಥಳೀಯ ಕೇಬಲ್ ಚಾನೆಲ್ಗಳ ಮೂಲಕ ಕನ್ನಡ ಮಾಧ್ಯಮ ತರಗತಿಗಳನ್ನು ನಡೆಸಲು ಕ್ರಮ ಕೈಗೊಳ್ಳಲಾಗುವುದು" ಎಂದು ಹೇಳಿದ್ದಾರೆ.