ಮೈಸೂರು, ಜು14 (DaijiworldNews/MS): ಅಕ್ರಮ ಗಣಿಯಿಂದ ಕೆಆರ್ಎಸ್ ಡ್ಯಾಂಗೆ ತೊಂದರೆಯಾಗಿದೆ, ಡ್ಯಾಂನಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಹೇಳಿಕೆ ನೀಡಿ ವಿವಾದದ ಕಿಡಿ ಹಚ್ಚಿದ್ದ ಸಂಸದೆ ಸುಮಲತಾ ಇದೀಗಾ ಯೂ ಟರ್ನ್ ಹೊಡೆದಿದ್ದು, "ನಾನು ಕೆ ಆರ್ ಎಸ್ ಡ್ಯಾಂನಲ್ಲಿ ಬಿರುಕು ಬಿಟ್ಟಿದೆ ಅಂತ ಹೇಳಿಯೇ ಇಲ್ಲ. ಆದರೂ ನನ್ನ ಹೇಳಿಕೆಯನ್ನು ಬೇರೆ ರೀತಿಯಲ್ಲಿ ಅರ್ಥೈಸಲಾಗಿದೆ" ಎಂದು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದಂತ ಅವರು, ನಾನು ಕೆ ಆರ್ ಎಸ್ ನಲ್ಲಿ ಬಿರುಕು ಬಿಟ್ಟಿದೆ ಅಂತ ಹೇಳಿಲ್ಲ. ಬಿರುಕು ಬಿಟ್ಟಿದೆಯಾ ಅಂತ ಸಭೆಯಲ್ಲಿ ಕೇಳಿದ್ದೇನೆ ಅಷ್ಟೇ. ನನ್ನ ಹೇಳಿಕೆಯನ್ನೇ ಬೇರೆ ರೀತಿಯಲ್ಲಿ ಅರ್ಥೈಸಲಾಗಿದೆ.ಕೆ ಆರ್ ಎಸ್ ಡ್ಯಾಂ ಸುತ್ತಮುತ್ತಲಿನ ಗಣಿಗಾರಿಕೆ ಕುರಿತಂತೆ ಸಿಬಿಐ ತನಿಖೆಯಾಗಲಿ, ಈ ಮೂಲಕ ಅಕ್ರಮ ಗಣಿಗಾರಿಕೆಯ ಕುರಿತಂತೆ ಸತ್ಯಾಸತ್ಯತೆ ಹೊರ ಬರಲಿ. ಈ ಬಗ್ಗೆ ನಾನು ಗಣಿ ಸಚಿವ ಮುರುಗೇಶ್ ನಿರಾಣಿಗೆ ಎಲ್ಲವನ್ನು ಹೇಳಿದ್ದೇನೆ ಎಂದು ಹೇಳಿದ್ದಾರೆ.
ಡ್ಯಾಂ ಬಿರುಕು ಬಿಟ್ಟಿಲ್ಲ ಎಂದು ಸ್ವತಃ ಕೆಆರ್ಎಸ್ ಇಂಜಿನಿಯರ್ಗಳು ಸ್ಪಷ್ಟೀಕರಣ ನೀಡಿದರೂ ಅದನ್ನು ಒಪ್ಪಿಕೊಳ್ಳದ ಸುಮಲತಾ ತನಿಖೆಗಾಗಿ ಈ ಹಿಂದೆ ಒತ್ತಾಯಿಸಿದ್ದರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಡ್ಯಾಂ ಸುರಕ್ಷಿತ ಎಂಬ ಹೇಳಿಕೆ ಕೊಡಿಸಿರುವ ಸಾಧ್ಯತೆ ಇರುತ್ತದೆ. ಹೀಗಾಗಿ ತಜ್ಞರ ತಂಡ ನೇಮಿಸಿ ಸಿಬಿಐ ತನಿಖೆ ನಡೆಸಿ ವರದಿ ನೀಡಲಿ ಎಂದು ಪಟ್ಟು ಹಿಡಿದಿದ್ದರು.