ಬೆಂಗಳೂರು, ಜು 14 (DaijiworldNews/PY): "ದೊಡ್ಡವರ ವಿಚಾರವಾಗಿ ನನ್ನನ್ನೂ ಏನೂ ಕೇಳಬೇಡಿ. ದೊಡ್ಡವರ ಬಗ್ಗೆ ಮಾತನಾಡುವುದಿಲ್ಲ" ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೊಡ್ಡವರ ಬಗ್ಗೆ ನಾನು ಮಾತನಾಡುವುದಿಲ್ಲ" ಎಂದು ಮಂಡ್ಯ ಸಂಸದೆ ಸುಮಲತಾ ಅವರ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಪತಿಕ್ರಿಯಿಸಿದ್ದಾರೆ.
"ಕೃಷಿ ಇಲಾಖೆಯ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಚನ್ನಪಟ್ಟಣ ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡ ಉದ್ಘಾಟನೆ ನೆರವೇರಿಸಲಾಗಿದೆ. ಇದಲ್ಲದೇ, ತಾಲೂಕಿನ ಅಭಿವೃದ್ದಿಗೆ ಸಂಬಂಧಪಟ್ಟಂತೆ ಮನವಿಗಳನ್ನು ಸಲ್ಲಿಸಲಾಗಿದೆ. ಆ ಬಗ್ಗೆ ಗಮನಹರಿಸಲಾಗುವುದು" ಎಂದು ತಿಳಿಸಿದ್ದಾರೆ.