ಬೆಂಗಳೂರು, ಜು 15 (DaijiworldNews/PY): "ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ,ರಾಜ್ಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದೆ" ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜು. 16ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕಬಳ್ಳಾಪುರ, ಗದಗ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ತುಮಕೂರು, ಯಾದಗಿರಿ, ಚಿತ್ರದುರ್ಗ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.