ಬೆಂಗಳೂರು, ಜು 15 (DaijiworldNews/PY): "ಜನವರಿ 15ರೊಳಗೆ 150 ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತೇವೆ" ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, "ಚುನಾವಣೆಗೆ ಎರಡು ವರ್ಷ ಬಾಕಿ ಇರುವಾಗೇ ಕಾಂಗ್ರೆಸ್ ಈಗಲೇ ಅಧಿಕಾರದ ಕನಸು ಕಾಣುತ್ತಿದೆ. ಒಂದೊಂದು ವೇಳೆ ಒಬ್ಬೊಬ್ಬರು ನಾನೇ ಸಿಎಂ ಎಂದು ಹೇಳುತ್ತಿದ್ದಾರೆ. ನಾವು ಕೂಡಾ ಈಗಲೇ ಅಭ್ಯರ್ಥಿಗಳ ಹೆಸರು ಘೋಷಿಸುತ್ತೇವೆ" ಎಂದು ಲೇವಡಿ ಮಾಡಿದ್ದಾರೆ.
"ಜನವರಿ 15ರೊಳಗೆ 150 ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತೇವೆ. ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಿದೆ" ಎಂದಿದ್ದಾರೆ.
2023ರ ಚುನಾವಣೆಗೆ ಆಡಳಿತರೂಢ ಬಿಜೆಪಿ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಈಗಿನಿಂದಲೇ ಸಿದ್ದರೆ ನಡೆಸಿದ್ದು, ಈ ಪೈಕಿ ಜೆಡಿಎಸ್ ಒಂದು ಹೆಜ್ಜೆ ಮುಂದೆ ಇಟ್ಟಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿದೆ.