ನವದೆಹಲಿ, ಜು.15 (DaijiworldNews/HR): ಇದುವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 40.31 ಕೋಟಿ ಡೋಸ್ ಕೊರೊನಾ ಲಸಿಕೆ ನೀಡಲಾಗಿದ್ದು, 1.92 ಕೋಟಿಗೂ ಅಧಿಕ ಡೋಸ್ ಲಸಿಕೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸಾಂಧರ್ಭಿಕ ಚಿತ್ರ
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, "ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಲ್ಲ ಮೂಲಗಳ ಮೂಲಕ ಇಲ್ಲಿಯವರೆಗೆ 40.31 ಕೋಟಿ (40,31,74,380) ಡೋಸ್ ಕೊರೊನಾ ಲಸಿಕೆಗಳನ್ನು ನೀಡಲಾಗಿದ್ದು, ಇನ್ನೂ 83,85,790 ಡೋಸ್ ಲಸಿಕೆ ಸರಬರಾಜು ಹಂತದಲ್ಲಿದೆ. ವೇಸ್ಟೇಜ್ ಸೇರಿದಂತೆ ಒಟ್ಟು 38,39,02,614 ಡೋಸ್ ಲಸಿಕೆ ಬಳಕೆ ಮಾಡಲಾಗಿದೆ" ಎಂದಿದೆ.
ಇನ್ನು ಕೇಂದ್ರ ಸರ್ಕಾರವು ದೇಶದಲ್ಲಿ ಲಸಿಕೆ ತಯಾರಕರು ಉತ್ಪಾದಿಸುತ್ತಿರುವ ಶೇ. 75 ರಷ್ಟು ಲಸಿಕೆಗಳನ್ನು ಸಂಗ್ರಹಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸುತ್ತಿದೆ.