ಶ್ರೀನಗರ, ಜು 16 (DaijiworldNews/PY): ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಶ್ರೀನಗರದ ದನ್ಮಾರ್ ಪ್ರದೇಶ್ ಆಲಂದಾರ್ ಕಾಲೋನಿಯಲ್ಲಿ ಶುಕ್ರವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಾತಿನಿಧಿಕ ಚಿತ್ರ
ಎನ್ಕೌಂಟರ್ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು, ಘಟನಾ ಸ್ಥಳದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಭಯೋತ್ಪಾದಕರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ತಿಳಿದ ಭದ್ರತಾ ಪಡೆಗಳು ದನ್ಮಾರ್ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ಪ್ರಾರಂಭಿಸಿದರು. ಈ ವೇಳೆ ಭದ್ರತಾಪಡೆ ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆದಿದೆ.