ಬೆಂಗಳೂರು, ಜು 17 (DaijiworldNews/MS): ರಾಜ್ಯ ಸರಕಾರವು, ಕೊರೊನಾ ಸೋಂಕಿನ ಪ್ರಕರಣಗಳ ಇಳಿಕೆ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಸಂಬಂಧಿತ ಕೋರ್ಸ್ಗಳ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ ಪುನರಾರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ನರ್ಸಿಂಗ್ ಹಾಗೂ ಆರೋಗ್ಯ ಸಂಬಂಧಿ ಇತರೆ ಕೋರ್ಸ್ಗಳ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಭೌತಿಕವಾಗಿ ತರಗತಿಗಳನ್ನು ಆರಂಭಿಸಬಹುದು ಎಂದು ತಿಳಿಸಿದೆ.
ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬಂದಿ ಈಗಾಗಲೇ ಲಸಿಕೆಯ ಮೊದಲ ಡೋಸ್ ಪಡೆದಿರುವ ಹಿನ್ನೆಲೆಯಲ್ಲಿ ತರಗತಿ ನಡೆಸಲು ಷರತ್ತು ಬದ್ಧ ಅನುಮತಿ ನೀಡಲಾಗಿದ್ದು, ಕೊರೊನಾ ನಿಯಮಗಳ ಉಲ್ಲಂಘನೆ ಮಾಡಿದರೆ ಸೆಕ್ಷನ್ 188ರ ಅಡಿಯಲ್ಲಿ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದೆ.
ಕನಿಷ್ಠ ಒಂದು ಡೋಸ್ ವಾಕ್ಸಿನ್ ತೆಗೆದುಕೊಂಡಿರುವ ವಿದ್ಯಾರ್ಥಿಗಳು, ಬೋಧಕ, ಸಿಬಂದಿ ಮಾತ್ರ ವೈದ್ಯಕೀಯ ಶಿಕ್ಷಣ ಸಂಸ್ಥೆ ಅಥವಾ ಕಾಲೇಜಿಗೆ ಬರಲು ಅವಕಾಶವಿದೆ. ಹೀಗಾಗಿ ಸೋಮವಾರದಿಂದ ರಾಜ್ಯದ ವೈದ್ಯಕೀಯ ಶಿಕ್ಷಣ ಸಂಬಂಧಿತ ಸಂಸ್ಥೆಗಳು ಭೌತಿಕ ತರಗತಿ ನಡೆಸುವ ಸಾಧ್ಯತೆ ಇದೆ.