ನವದೆಹಲಿ, ಜು 17 (DaijiworldNews/PY): "ನಾನು ರಾಜೀನಾಮೆ ನೀಡಲಿದ್ದೇನೆ ಎನ್ನುವುದು ಸತ್ಯಕ್ಕೆ ದೂರವಾದ ವಿಚಾರ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ" ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಭೇಟಿಗೆ ತೆರಳಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಉಳಿದ ಅವಧಿಯವರೆಗೂ ನಾನೇ ಸಿಎಂ ಆಗಿ ಮುಂದುವರಿಯಲಿದ್ದೇನೆ. ನಾನು ರಾಜೀನಾಮೆ ನೀಡುತ್ತೇನೆ ಎನ್ನುವ ಊಹಾಪೋಹಗಳಿಗೆ ಕಿವಿಗೊಡಬೇಡಿ. ಇದು ಕೇವಲ ಗಾಳಿ ಸುದ್ದಿಯಷ್ಟೇ. ರಾಜೀನಾಮೆ ಕೊಡಿ" ಎಂದು ಹೈಕಮಾಂಡ್ ಕೇಳಿಲ್ಲ ಎಂದು ತಿಳಿಸಿದ್ದಾರೆ.
"ಪ್ರಧಾನಿ ಮೋದಿ ಅವರ ಜೊತೆ ನಾನು ರಾಜ್ಯದ ಅಭಿವೃದ್ದಿ ಹಾಗೂ ಮೇಕೆದಾಟು ಯೋಜನೆಯ ವಿಚಾರವಾಗಿ ಮಾತುಕತೆ ನಡೆಸಿದ್ದೇನೆ. ಪಕ್ಷದ ವರಿಷ್ಠರಾದ ಅಮಿತ್ ಶಾ, ಜೆ.ಪಿ.ನಡ್ಡಾ, ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದೇನೆ" ಎಂದಿದ್ದಾರೆ.
"ಆಗಸ್ಟ್ ಮೊದಲ ವಾರದ ಮತ್ತೆ ದೆಹಲಿಗೆ ಆಗಮಿಸಿ ರಾಜ್ಯದ ಅಭಿವೃದ್ದಿ ಬಗ್ಗೆ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸುತ್ತೇನೆ" ಎಂದು ಹೇಳಿದ್ದಾರೆ.