ಮಂಡ್ಯ, ಜು.17 (DaijiworldNews/HR): ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಮಂಡ್ಯ ಜಿಲ್ಲೆಯ ರೈತ ಹೋರಾಟಗಾರ, ಮಾಜಿ ಸಂಸದ ಜಿ. ಮಾದೇಗೌಡ ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಜಿ.ಮಾದೇಗೌಡ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದ ಕಾರಣ ನಂತರ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಜಿ. ಮಾದೇಗೌಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಇಂದು ಚಿಕಿತ್ಸೆಗೆ ಸ್ಪಂದಿಸದ ನಿಧನರಾಗಿದ್ದಾರೆ.
ಇನ್ನು ಮಾಜಿ ಸಂಸದ ಜಿ ಮಾದೇಗೌಡ ಕಾವೇರಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾದೇಗೌಡರನ್ನು ರಾಜ್ಯದ ಅನೇಕ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.