ಬೆಂಗಳೂರು, ಜು 18 (DaijiworldNews/PY): ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ.
ಸಾಂದರ್ಭಿಕ ಚಿತ್ರ
ಇನ್ನು 5 ದಿನ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದ್ದು, ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಧಾರಾಕಾರ ಮಳೆಯಾಗಲಿದ್ದು, ಈ ಭಾಗದಲ್ಲಿ 48 ಗಂಟೆ ಕಾಲ ಆರೆಂಜ್ ಅಲರ್ಟ್, ಜು.20ರಿಂದ 22ರವೆರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.