ಬೆಂಗಳೂರು, ಜು 18 (DaijiworldNews/PY): "ರಾಜ್ಯಾದ್ಯಂತ ವೈದ್ಯಕೀಯ, ಆಯುಷ್, ದಂತ ವೈದ್ಯಕೀಯ ಹಾಗೂ ಪ್ಯಾರಾ ಮೆಡಿಕಲ್ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದೆ" ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ರಾಜ್ಯಾದ್ಯಂತ ವೈದ್ಯಕೀಯ, ಆಯುಷ್, ದಂತ ವೈದ್ಯಕೀಯ ಹಾಗೂ ಪ್ಯಾರಾ ಮೆಡಿಕಲ್ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದ್ದು, ಕೊರೊನಾ ಲಸಿಕೆ ಪಡೆದಿರುವ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಮಾತ್ರ ಕಾಲೇಜು ಹಾಜರಾತಿಗೆ ಅವಕಾಶ ನೀಡಲಾಗಿದೆ" ಎಂದು ತಿಳಿಸಿದ್ದಾರೆ.
"ಕೊರೊನಾ ಮೂರನೇ ಅಲೆಯ ಭೀತಿ ಹಿನ್ನೆಲೆ ಪ್ರತಿ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಆರೈಕೆಗಾಗಿ ವಿಶೇಷ ವಿಭಾಗ ಪ್ರಾರಂಭಿಸಲಾಗುತ್ತಿದೆ. ಹಾಗಾಗಿ ಅದಕ್ಕೆ ಬೇಕಾದ ಮಾನವ ಸಂಪನ್ಮೂಲನಗಳನ್ನು ಒದಗಿಸಲಾಗಿದೆ. ಹಲವು ದೇಶಗಳಲ್ಲಿ ಮೂರನೇ ಅಲೆ ಬಂದಿದೆ. ಈ ಬಗ್ಗೆ ಎಚ್ಚೆತ್ತುಕೊಳ್ಳದೇ ಇದ್ದಲ್ಲಿ ನಾವೇ ಮೂರನೇ ಅಲೆ ಉಂಟು ಮಾಡಿದಂತಾಗುತ್ತದೆ" ಎಂದಿದ್ಧಾರೆ.