ಡೆಹ್ರಾಡೂನ್,ಜು.19 (DaijiworldNews/HR): ಭಾರೀ ಮೇಘ ಸ್ಫೋಟದಿಂದಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟು ನಾಲ್ವರು ನಾಪತ್ತೆಯಾಗಿರುವ ನಾಪತ್ತೆಯಾಗಿರುವ ಘಟನೆ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಘಟನೆಯಲ್ಲಿ ಮೃತಪಟ್ಟವರನ್ನು ಮಾಧುರಿ ದೇವಿ(36), ರಿತು ದೇವಿ(32) ಮತ್ತು ಅವರ ಮೂರು ವರ್ಷದ ಪುತ್ರಿ ತ್ರಿಶ್ವಿ ಎಂದು ಗುರುತಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಉತ್ತರಕಾಶಿಯ ವಿಪತ್ತು ನಿರ್ವಹಣಾ ಅಧಿಕಾರಿ ದೇವೇಂದ್ರ ಪತ್ವಾಲ್, ನೆರೆಯ ಕಂಕಾರಿ ಗ್ರಾಮದಲ್ಲೂ ಮೇಘ ಸ್ಪೋಟದಿಂದಾಗಿ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ನಡೆಸಲಾಗುತ್ತಿದೆ. ಪೀಡಿತ ಪ್ರದೇಶಗಳಲ್ಲಿ ಎಸ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಈಗಾಗಲೇ ಕೊಳೆಗೇರಿಗಳಲ್ಲಿ ಸಿಲುಕಿರುವ ಹೆಚ್ಚಿನ ಜನರನ್ನು ರಕ್ಷಿಸಲಾಗಿದೆ" ಎಂದರು.
ಇನ್ನು ಈ ಘಟನೆಯಲ್ಲಿ ಮೃತಪಟ್ಟವರ ಬಗ್ಗೆ ಸಂತಾಪ ಸೂಚಿರುವ ಮುಖ್ಯಮಂತ್ರಿ ಪುಷ್ಕರ್ಸಿಂಗ್ ಧಾಮಿ ಅವರು ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಉತ್ತರಕಾಶಿ ಜಿಲ್ಲಾಧಿಕಾರಿಗೆ ಸೂಚಿಸಿದ್ಧಾರೆ ಎನ್ನಲಾಗಿದೆ.