ಹಾಸನ, ಜು 19 (DaijiworldNews/PY): "ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಲಿದೆ ಎಂದು ಹೇಳಲು ನಮ್ಮ ಬಳಿ ಕೊರವಂಜಿಗಳಿದ್ದಾರೆ" ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಲೇವಡಿ ಮಾಡಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, "ಚುನಾವಣೆಯ ಬಗ್ಗೆ ಭವಿಷ್ಯ ನುಡಿಯಲು ನಮ್ಮ ಬಳಿ ಮೂವರು ಕೊರವಂಜಿಗಳಿದ್ದಾರೆ. ದೊಡ್ಡವರ ಬಗ್ಗೆ ನಾನೇನು ಮಾತನಾಡುವುದಿಲ್ಲ" ಎಂದಿದ್ದಾರೆ.
"ಕೊರೊನಾದ ಮೂರನೇ ಅಲೆ ಬಗ್ಗೆ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಳ್ಳಬೇಕು. ಮೂರನೇ ಅಲೆ ನಿಯಂತ್ರಣಕ್ಕೆ ಏನು ಬೇಕು ಎನ್ನುವುದರ ಬಗ್ಗೆ ಈಗಾಗಕೇ ಹಾಸನ ಜಿಲ್ಲಾಧಿಕಾರಿ ಸರ್ಕಾರಕ್ಕೆ ಮಾಹಿತಿ ಕಳುಹಿಸಿದ್ದಾರೆ. ಆದರೆ, ಈವರೆಗೆ ಸರ್ಕಾರ ಏನೂ ಮಾಡಿಲ್ಲ. ಮೂರನೇ ಅಲೆ ವೇಗವಾಗಿ ವ್ಯಾಪಿಸುತ್ತಿದ್ದು, ಸರ್ಕಾರ ತಕ್ಷಣವೇ ಎಲ್ಲಾ ಆಸ್ಪತ್ರೆಗಳಲ್ಲೂ ಕನಿಷ್ಟ ನೂರು ಬೆಡ್ಗಳ ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಕಳುಹಿಸಿಕೊಟ್ಟಿರುವ ಬೇಡಿಕೆ ಈಡೇರಿಸಬೇಕು" ಎಂದು ಮನವಿ ಮಾಡಿದ್ದಾರೆ.
ಈ ವೇಳೆ ಸಿಎಂ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.