ಬೆಂಗಳೂರು, ಜು.19 (DaijiworldNews/HR): ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದ್ದು, ಸೋಮವಾರ 1,291 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 28,85,238ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಸಚಿವಾಲಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 40 ಮಂದಿ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 36,197ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಇಂದು 3,015 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,21,491ಕ್ಕೆ ಏರಿಕೆಯಾಗಿ, 27,527 ಸಕ್ರೀಯ ಪ್ರಕರಣಗಳಿವೆ.
ಸೋಮವಾರ ರಾಜ್ಯದಲ್ಲಿ 1,35,974 ಮಂದಿಗೆ ಕೊರೊನಾ ಟೆಸ್ಟ್ ನಡೆಸಲಾಗಿದ್ದು, 1,291 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.94ಕ್ಕೆ ಇಳಿದಿದೆ.