ತಿರುವನಂತಪುರಂ, ಜು.20 (DaijiworldNews/HR): ಪೂರ್ಣ ಪ್ರಮಾಣದ ಲಸಿಕೆ ಹಾಕಿಸಿಕೊಂಡಿದ್ದ ಕೇರಳದ ತ್ರಿಶೂರ್ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ 39 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೊರೊನಾ ಲಾಕ್ಡೌನ್ ನಿಂದ ಮೆಡಿಕಲ್ ಕಾಲೇಜ್ ಅನ್ನು ಬಂದ್ ಮಾಡಲಾಗಿದ್ದು, ಜೂ.1 ರಿಂದ ಪುನಃ ಪ್ರಾರಂಭ ಮಾಡಲಾಗಿತ್ತು.
ಜೂನ್ 06 ರಂದು ಎರಡನೇ ಬ್ಯಾಚ್ ನ 175 ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿದ ದಿನದಂದೇ ಮೊದಲಕೊರೊನಾ ಸೋಂಕು ಪ್ರಕರಣ ವರದಿಯಾಗಿದ್ದು, ಈ ಬ್ಯಾಚ್ ನ ಎಲ್ಲಾ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆಯನ್ನು ಜುಲೈ 17 ರಂದು ನಡೆಸಲಾಗಿತ್ತು. 20 ಮಂದಿಗೆ ಸೋಂಕು ದೃಢಪಟ್ಟಿದ್ದ ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ಮನೆಗೆ ತೆರಳಲು ಅನುಮತಿ ನೀಡಲಾಗಿತ್ತುಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಮೂರು ಬ್ಯಾಚ್ ನ ವಿದ್ಯಾರ್ಥಿಗಳ ಪೈಕಿ 39 ಮಂದಿ ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.