ನವದೆಹಲಿ, ಜು.20 (DaijiworldNews/HR): ಕೇರಳದ ಕೆಲ ಪ್ರದೇಶಗಳಲ್ಲಿಕೊರೊನಾದ ಪ್ರಕರಣಗಳು ಹೆಚ್ಚಾಗಿದ್ದರೂ ಕೂಡ ಬಕ್ರೀದ್ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಿಸಲು ಅನುಮತಿ ನೀಡಿರುವ ಆ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.
ಸಾಂಧರ್ಭಿಕ ಚಿತ್ರ
ಬಕ್ರೀದ್ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸಿರುವುದರಿಂದ ಸೋಂಕು ಮತ್ತಷ್ಟು ವ್ಯಾಪಕವಾಗುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂಕೋರ್ಟ್ ಎಚ್ಚರಿಸಿದೆ.
ಇನ್ನು ಈ ಕುರಿತು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್.ಎಫ್.ನರೀಮನ್ ಹಾಗೂ ಬಿ.ಆರ್.ಗವಾಯಿ ಅವರಿರುವ ನ್ಯಾಯಪೀಠ, "ಕೇರಳ ಸರ್ಕಾರದ ರೀತಿಯಲ್ಲೇ ನಿರ್ಬಂಧಗಳ ಸಡಿಲಿಕೆಗೆ ಅನುಮತಿ ನೀಡುವ ಮೂಲಕ ದೇಶದ ಜನತೆಯನ್ನು ಕೊರೊನಾ ಸಂಕಷ್ಟಕ್ಕೆ ದೂಡಿದಂತಾಗುತ್ತಿದೆ" ಎಂದು ಕಳವಳ ವ್ಯಕ್ತಪಡಿಸಿದೆ" ಎನ್ನಲಾಗಿದೆ.