ಮುಂಬೈ, ಜು 20 (DaijiworldNews/MS): ಪೋರ್ನ್ ಸಿನಿಮಾಗಳನ್ನು ಮಾಡಿ ಅದನ್ನು ಬೇರೆ ಬೇರೆ ಆಪ್ ಗಳಲ್ಲಿ ಆಪ್ ಲೋಡ್ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತನಾಗಿರುವ ಖ್ಯಾತ ನಟಿ ಶಿಲ್ಪಾ ಶಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಅವರನ್ನು ಜು.20 ರ ಮಧ್ಯಾಹ್ನ ಮುಂಬೈನ್ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮಂಗಳವಾರ ಬೆಳಿಗ್ಗೆ ನೆರುಲ್ ಪ್ರದೇಶದಿಂದ ಬಂಧಿಸಲ್ಪಟ್ಟ ರಿಯಾನ್ ಥಾರ್ಪ್ ಅವರೊಂದಿಗೆ ಉದ್ಯಮಿಯನ್ನ ಜುಲೈ 23ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಅಶ್ಲೀಲ ಚಲನಚಿತ್ರಗಳನ್ನು ತಯಾರಿಸಿ ಮಾರಾಟ ಮಾಡುವ ಮೂಲಕ ಆರ್ಥಿಕವಾಗಿ ಲಾಭ ಗಳಿಸುತ್ತಿದ್ದು ಅವರ ವ್ಯವಹಾರ ಮತ್ತು ವಹಿವಾಟುಗಳನ್ನು ಸಹ ಪರಿಶೀಲಿಸಬೇಕಾಗಿದೆ ಪೊಲೀಸರು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ.
"ಅಶ್ಲೀಲ ಚಲನಚಿತ್ರಗಳ ನಿರ್ಮಿಸಿ ಮತ್ತು ಅವುಗಳನ್ನು ಕೆಲವು ಆಪ್ ಮೂಲಕ ಪ್ರಕಟಿಸುವ ಬಗ್ಗೆ ಫೆಬ್ರವರಿ 2021 ರಲ್ಲಿ ಮುಂಬೈ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. . ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು ಜು.19 ರಂದು ಬಂಧಿಸಿದ್ದೇವೆ. ಈ ಬಗ್ಗೆ ನಮಗೆ ಸಾಕಷ್ಟು ಪುರಾವೆಗಳಿವೆ ಇಡೀ ಪ್ರಕರಣದ ರೂವಾರಿ ಅವರೇ ಆಗಿದ್ದಾರೆ "ಎಂದು ಮುಂಬೈ ಪೊಲೀಸ್ ಆಯುಕ್ತರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದರು. ಫೆಬ್ರವರಿ ತಿಂಗಳಲ್ಲಿ ರಾಜ್ ಕುಂದ್ರಾ ವಿರುದ್ಧ ಈ ಸಂಬಂಧ ದೂರು ದಾಖಲಾಗಿತ್ತು. ಬಳಿಕ ತಮ್ಮ ಮೇಲಿನ ಆರೋಪ ತಳ್ಳಿ ಹಾಕಿದ್ದ ರಾಜ್ ಕುಂದ್ರಾ, ನಿರೀಕ್ಷಣಾ ಜಾಮೀನು ತೆಗೆದುಕೊಂಡಿದ್ದರು.
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವನನ್ನು ಬಂಧಿಸಲಾಗಿದೆ. ಆತನನ್ನು ರಿಯಾನ್ ಥಾರ್ಪ್ ಎಂದು ಗುರುತಿಸಲಾಗಿದೆ. ಈತ ಥಾರ್ಪ್ ಆಪ್ ಕಂಪನಿಯಲ್ಲಿ ಉತ್ತಮ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.