ನವದೆಹಲಿ, ಜು. 20 (DaijiworldNews/SM): ಕೊರೋನಾದಿಂದಾಗಿ ದೇಶದಲ್ಲಿ ಉಂಟಾಗಿರುವ ಸಾವಿನ ಸಂಖ್ಯೆಯ ಬಗ್ಗೆ ಕೇಂದ್ರ ಸರಕಾರ ಸುಳ್ಳು ಮಾಹಿತಿ ನೀಡುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಕೋವಿಡ್-19 ಸಾಂಕ್ರಾಮಿಕದಿಂದ ದೇಶದಲ್ಲಿ ಸಂಭವಿಸಿರುವ ಸಾವಿನ ಸಂಖ್ಯೆ 4-5 ಲಕ್ಷ ಎಂದು ಕೇಂದ್ರ ಸರ್ಕಾರ ನೀಡಿರುವ ಅಂಕಿಅಂಶ ಸುಳ್ಳು ಎಂದಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಫಲರಾಗಿದ್ದಾರೆ. ಆರೋಗ್ಯ ಬಿಕ್ಕಟ್ಟು ಅಸರ್ಮಪಕ ನಿರ್ವಹಣೆ ಕಾರಣದಿಂದಾಗಿ ಈ ಹಿಂದೆ ಆರೋಗ್ಯ ಸಚಿವರಾಗಿದ್ದ ಹರ್ಷವರ್ಧನ್ ಅವರನ್ನು ಬಲಿಪಶು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ದೇಶದಲ್ಲಿ ಸಂಭವಿಸಿರುವ ಕೋವಿಡ್-19 ಸಾವಿನ ಸಂಖ್ಯೆ ಬಗ್ಗೆ ಸರ್ಕಾರ ಸುಳ್ಳು ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದು, ಸತ್ಯಕ್ಕೆ ದೂರವಾಗಿದೆ. ಹಳ್ಳಿಗಳಲ್ಲಿಯೇ ಸುಮಾರು 6,38,565 ಲಕ್ಷ ಜನರು ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.