ಬೆಂಗಳೂರು, ಜು 21 (DaijiworldNews/PY): "ಕರ್ನಾಟಕದಲ್ಲಿ ಬಿಜೆಪಿಯನ್ನು ಮೊದಲು ಅಧಿಕಾರಕ್ಕೆ ತಂದವರೇ ಬಿ.ಎಸ್.ಯಡಿಯೂರಪ್ಪ. ಅವರು ಚಮ್ಚಾ ಆಗದ ಕಾರಣ ಕೆಲವರು ಅವರನ್ನು ಅಧಿಕಾರದಿಂದ ತೆಗೆದುಹಾಕಲು ಸಂಚು ಹೂಡುತ್ತಿದ್ದಾರೆ" ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣ್ಯನ್ ಸ್ವಾಮಿ ಅವರು ಸಿಎಂ ಯಡಿಯೂರಪ್ಪ ಪರ ಬ್ಯಾಟ್ ಬೀಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಕರ್ನಾಟಕದಲ್ಲಿ ಬಿಜೆಪಿಯನ್ನು ಮೊದಲು ಅಧಿಕಾರಕ್ಕೆ ತಂದವರೇ ಬಿ.ಎಸ್.ಯಡಿಯೂರಪ್ಪ. ಅವರು ಚಮ್ಚಾ ಆಗದ ಕಾರಣ ಕೆಲವರು ಅವರನ್ನು ಅಧಿಕಾರದಿಂದ ತೆಗೆದುಹಾಕಲು ಸಂಚು ಹೂಡುತ್ತಿದ್ದಾರೆ. ಅವರಿಲ್ಲದ ವೇಳೆ ಬಿಜೆಪಿಗೆ ರಾಜ್ಯದಲ್ಲಿ ಅಧಿಕಾರ ಮರಳಿ ಪಡೆಯಲಯ ಸಾಧ್ಯವಾಗಿಲ್ಲ. ಯಡಿಯೂರಪ್ಪ ಅವರು ಬಿಜೆಪಿಗೆ ಮರಳಿದ ಬಳಿಕವೇ ಬಿಜೆಪಿ ಮತ್ತೆ ಗೆಲ್ಲಲು ಸಾಧ್ಯವಾಯಿತು. ಅದೇ ತಪ್ಪನ್ನು ಈಗ ಏಕೆ ಪುನರಾವರ್ತಿಸಬೇಕು?" ಎಂದು ಪ್ರಶ್ನಿಸಿದ್ದಾರೆ.
ನಾಯಕತ್ವ ಬದಲಾವಣೆ ವದಂತಿ ಹೆಚ್ಚಾಗುತ್ತಿದ್ದಂತೆ ಸಿಎಂ ಅವರನ್ನು ವಿವಿಧ ಮಠಾಧೀಶರು ಭೇಟಿ ಮಾಡುತ್ತಿದ್ದಾರೆ. ಈ ಸಂದರ್ಭ ಸಿಎಂ ಬದಲಾವಣೆ ಮಾಡಬಾರದು, ಮುಂದಿನ ಎರಡು ವರ್ಷ ಯಡಿಯೂರಪ್ಪ ಅವರನ್ನೇ ಸಿಎಂ ಆಗಿ ಮುಂದುವರಿಸಬೇಕು ಎಂದು ಮಠಾಧೀಶರು ಹೇಳುತ್ತಿದ್ದಾರೆ.