ಬೆಂಗಳೂರು, ಜು. 21 (DaijiworldNews/SM): ರಾಜ್ಯದಲ್ಲಿ ನಾಯಕತ್ವದ ಕೂಗು ಬೇರೆ ಬೇರೆ ತಿರುವುಗಳನ್ನು ಪಡೆಯುತ್ತಿದ್ದು, ನಾಯಕತ್ವ ಬದಲಾವಣೆಯ ಸಾಧ್ಯತೆಯ ಮಾತುಗಳೇ ಹೆಚ್ಚಾಗಿ ಕೇಳಿ ಬರುತ್ತಿವೆ. ಇದೀಗ ಸಿಎಂ ಬಿ.ಎಸ್. ಯಡಿಯೂರಪ್ಪ ಪರ ಕೇಂದ್ರದ ಮಾಜಿ ಸಚಿವ ಸುಬ್ರಮಣ್ಯನ್ ಸ್ವಾಮಿ ಬ್ಯಾಟ್ ಬೀಸಿದ್ದಾರೆ.
ಯಡಿಯೂರಪ್ಪ ಇಲ್ಲದಿದ್ದರೆ, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುವುದಾಗಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಕಾರಣ. ಮೊದಲ ಬಾರಿಗೆ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತಂದಿರುವುದು ಯಡಿಯೂರಪ್ಪನವರು. ಯಡಿಯೂರಪ್ಪ ನೇರ ವ್ಯಕ್ತಿತ್ವದ್ದವರಾದ್ದರಿಂದ ಅವರನ್ನು ಅಧಿಕಾರದಿಂದ ಇಳಿಸುವ ಪಿತೂರಿ ನಡೆಸಲಾಗುತ್ತಿದೆ' ಎಂದು ಸುಬ್ರಮಣ್ಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
'ಯಡಿಯೂರಪ್ಪ ಅವರನ್ನು ದೂರವಿಟ್ಟು ಕರ್ನಾಟಕದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಾಧ್ಯವಿಲ್ಲ. ಅವರ ಈ ಹಿಂದೆ ಪಕ್ಷ ಬಿಟ್ಟು ಹೋದಾಗ ಬಿಜೆಪಿ ಮುಖಭಂಗ ಅನುಭವಿಸಿತ್ತು. ಮರಳಿ ಪಕ್ಷಕ್ಕೆ ಆಗಮಿಸಿದ ಬಳಿಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಹೀಗಿರುವಾಗ ಮತ್ತೆ ಈ ಹಿಂದಿನ ತಪ್ಪನೇ ಯಾಕೆ ಮಾಡುತ್ತಿರಿ ಎಂದು ಸುಬ್ರಮಣ್ಯನ್ ಸ್ವಾಮಿ ಪ್ರಶ್ನಿಸಿದ್ದಾರೆ.