ಬೆಂಗಳೂರು, ಜು. 21 (DaijiworldNews/SM): ರಾಜ್ಯದಲ್ಲಿ ಸಿಎಂ ಬದಲಾವಣೆ ಪರ ವಿರೋಧ ಹೇಳಿಕೆಗಳು ಕೇಳಿ ಬಂದಿರುವ ನಡುವೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೌನ ಮುರಿದಿದ್ದು, ಪ್ರಸ್ತುತ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಕೂಡ ಮುಂದಾಗಬಾರದೆಂದು ವಿನಂತಿಸಿದ್ದಾರೆ.
ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದಿರುವ ಅವರು, ‘ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ, ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ’ ಎಂಬುವುದಾಗಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದಿದ್ದಾರೆ.