ಪಂಜಾಬ್ , ಜು 22 (DaijiworldNews/MS): ಪಂಜಾಬ್ ಕಾಂಗ್ರೆಸ್ನ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ನವಜೋತ್ ಸಿಂಗ್ ಸಿಧು, ಶುಕ್ರವಾರದಂದು ಅಧಿಕಾರ ಸ್ವೀಕರಿಸಲಿದ್ದಾರೆ. ಸಿಧು ನೇಮಕವಾಗಿರುವ ಕುರಿತು ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಅಸಮಾಧಾನವಿದೆ. ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಅವರ ತೀವ್ರ ವಿರೋಧದ ನಡುವೆಯೂ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷನಾಗಿ ಸಿಧು ಅವರನ್ನು ವರಿಷ್ಠರು ಆಯ್ಕೆ ನಡೆದಿದೆ.
ಇನ್ನು ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಕಾರ್ಯಕ್ರಮಕ್ಕೆ ಅಮರಿಂದರ್ ಸಿಂಗ್ ಅವರಿಗೂ ಆಹ್ವಾನ ನೀಡಲಾಗಿದೆ. ಇನ್ನುಅಧ್ಯಕ್ಷರಾಗಿ ನೇಮಕಗೊಂಡ ನವಜೋತ್ ಸಿಂಗ್ ಸಿಧು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. 62 ಶಾಸಕರ ಜೊತೆ ಅವರು ಸ್ವರ್ಣ ಮಂದಿರಕ್ಕೆ ಭೇಟಿ ನೀಡಿದ್ದರು.
ಇತ್ತ ಕಡೆ ವೈಯಕ್ತಿಕ ಅವಹೇಳನಕಾರಿ ಟ್ವೀಟ್ಗೆ ಸಂಬಂಧಿಸಿದಂತೆ ಸಿಧು ಸಾರ್ವಜನಿಕವಾಗಿ ಕ್ಷಮೆಯಾಚಿಸುವವರೆಗೂ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಭೇಟಿಯಾಗುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಮಾಧ್ಯಮ ಸಲಹೆಗಾರ ರವೀನ್ ತುಕ್ರಾಲ್ ಸ್ಪಷ್ಟಪಡಿಸಿದ್ದಾರೆ.
ಒಟ್ಟಾರೆ ಪಂಜಾಬ್ ಕಾಂಗ್ರೆಸ್ನಲ್ಲಿ ಆಂತರಿಕ ಬಿಕ್ಕಟ್ಟು ಮುಂದುವರಿದಿದೆ. ಪಕ್ಷದಲ್ಲಿನ ಅಸಮಾಧಾನವೇ ಚುನಾವಣೆಯಲ್ಲಿ ಪಕ್ಷದ ಹಿನ್ನಡೆಗೆ ಕಾರಣವಾಗಲಿದೆಯೇ ಎನ್ನುವ ಅನುಮಾನ ಮೂಡತೊಡಗಿದೆ.