ನವದೆಹಲಿ, ಜು. 21 (DaijiworldNews/SM): ದೇಶದಲ್ಲಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುವ ರೈತರನ್ನು ಗೂಂಡಾಗಳೆಂದು ಕೇಂದ್ರ ಸಚಿವೆ ಮೀನಾಕ್ಷಿ ಲೇಕಿ ಟೀಕಿಸಿದ್ದು, ಚರ್ಚೆಗೆ ಕಾರಣವಾಗಿದೆ.
ಜಂತರ್ ಮಂಥರ್ ನಲ್ಲಿ ಮಾಧ್ಯಮ ಸಿಬ್ಬಂದಿ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಸಚಿವೆ ಮೀನಾಕ್ಷಿ ಈ ಹೇಳಿಕೆ ನೀಡಿದ್ದಾರೆ. ಪ್ರತಿಪಕ್ಷಗಳು ಇಂತಹ ಚಟುವಟಿಕೆಗಳನ್ನು ಪ್ರಚೋದಿಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ, ಗೂಂಡಾಗಳು ಎಂದು ಹಲ್ಲೆ ನಡೆಸಿದ ರೈತರ ವಿರುದ್ಧ ಗುಡುಗಿದ್ದಾರೆ.